ಶಿವಮೊಗ್ಗ: ಸಾವರ್ಕರ್, ಹೆಡ್ಗೇವಾರ್ ಪಠ್ಯ ಕೈಬಿಟ್ಟಿದ್ದಕ್ಕೆ ಖಂಡನೆ.. ಬಿಜೆಪಿ ಕಾರ್ಯಕರ್ತರಿಂದ ಕಪ್ಪುಪಟ್ಟಿ ಪ್ರದರ್ಶನ - BJP protest at Shivamogga
ಶಿವಮೊಗ್ಗ :ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೇವಾರ್ ಹಾಗೂ ವಿ.ಡಿ ಸಾವರ್ಕರ್ ಕುರಿತ ಪಠ್ಯ ತೆಗೆದಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಗರದ ಜಿಲ್ಲಾ ಪಂಚಾಯತ್ನಲ್ಲಿ ಆಯೋಜಿಸಲಾಗಿದ್ದ ಮಳೆ ಹಾನಿ ಪರಿಶೀಲನೆ ಸಭೆಗೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಪಂಚಾಯತ್ ಸಭಾಂಗಣದೊಳಗೆ ನುಗ್ಗಿದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಈ ಮೂಲಕ ಮಳೆ ಹಾನಿ ಪರಿಶೀಲನಾ ಸಭೆಗೆ ಆಗಮಿಸಿದ ಸಚಿವ ಮಧು ಬಂಗಾರಪ್ಪಗೆ ಪ್ರತಿಭಟನೆಯ ಬಿಸಿ ತಟ್ಟಿತು.
ಇದನ್ನೂ ಓದಿ :ಸೀಟಿಗಾಗಿ ಮಹಿಳೆಯರ ಕಿತ್ತಾಟ; ಜಗಳ ಬಿಡಿಸಲಾಗದೇ ಪೊಲೀಸ್ ಠಾಣೆಗೆ ಬಸ್ ಚಲಾಯಿಸಿದ ಚಾಲಕ- ವಿಡಿಯೋ