ಕರ್ತವ್ಯದಲ್ಲಿದ್ದ ಚಾಲಕ ಅಸ್ವಸ್ಥ: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿಎಂಟಿಸಿ ಬಸ್ ಪಲ್ಟಿ, ಹಲವರಿಗೆ ಗಾಯ - ಬೆಂಗಳೂರು ಅಪಘಾತ ಸುದ್ದಿ
Published : Aug 29, 2023, 12:01 PM IST
ಬೆಂಗಳೂರು:ಕರ್ತವ್ಯದಲ್ಲಿದ್ದ ಚಾಲಕ ಅಸ್ವಸ್ಥನಾದ ಪರಿಣಾಮ ಬಿಎಂಟಿಸಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಡರಾತ್ರಿ ಪ್ಯಾಲೇಸ್ ಗುಟ್ಟಹಳ್ಳಿ ಬಳಿಯ ಮೇಲ್ಸೇತುವೆ ಬಳಿ ಈ ಅವಘಡ ನಡೆದಿದೆ. ಚಾಲಕನಿಗೆ ತಲೆ ಸುತ್ತು ಕಾಣಿಸಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಚ್‍ಎಸ್‍ಆರ್ ಲೇಔಟ್ ಮಾರ್ಗವಾಗಿ ಸಾಗುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಪ್ಯಾಲೇಸ್ ಗುಟ್ಟಹಳ್ಳಿ ಫ್ಲೈ ಓವರ್ ಬಳಿ ಬಂದಾಗ ಚಾಲಕ ತಲೆ ಸುತ್ತಿನಿಂದ ಅಸ್ವಸ್ಥನಾಗಿದ್ದಾನೆ. ನೋಡ ನೋಡುತ್ತಿದ್ದಂತೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿ 13 ಮಂದಿ ಪ್ರಯಾಣಿಕರಿದ್ದರು. ಘಟನೆಯಿಂದ ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಫುಟ್ಪಾತ್ಗೆ ನುಗ್ಗಿದ ಬಸ್: ಬ್ರೇಕ್ ಫೇೆಲ್ ಆದ ಪರಿಣಾಮ ಬಸ್ವೊಂದು ಫುಟ್ಪಾತ್ಗೆ ನುಗ್ಗಿದೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಿನ್ನೆ (ಸೋಮವಾರ) ರಾತ್ರಿ ಘಟನೆ ನಡೆದಿದೆ.
ಇದನ್ನೂ ಓದಿ:ಬ್ರೇಕ್ ಫೆಲ್ ಆಗಿ ಫುಟ್ಪಾತ್ಗೆ ನುಗ್ಗಿದ ಬಸ್: ಪ್ರಾಣಾಪಾಯದಿಂದ ಪಾರಾದ 50ಕ್ಕೂ ಹೆಚ್ಚು ಪ್ರಯಾಣಿಕರು...