ಅಮೆರಿಕದಲ್ಲಿ ಶೂಟಿಂಗ್ ವೇಳೆ ಗಾಯಗೊಂಡಿದ್ದ ಶಾರೂಖ್ ಖಾನ್ ಭಾರತಕ್ಕೆ ವಾಪಸ್: ವಿಡಿಯೋ - Shah Rukh Khan arrives at Mumbai
ಮುಂಬೈ:ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದಲ್ಲಿ 'ಜವಾನ್' ಸಿನಿಮಾ ಶೂಟಿಂಗ್ ವೇಳೆ ಮೂಗಿಗೆ ಗಾಯ ಮಾಡಿಕೊಂಡು ಶಸ್ತ್ರಚಿಕಿತ್ಸೆ ಒಳಗಾಗಿದ್ದರು. ಇದೀಗ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.
ಲಾಸ್ ಏಂಜಲೀಸ್ನಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ನಡೆದ ಅವಘಡದಲ್ಲಿ ಶೂರೂಖ್ ಮೂಗಿಗೆ ಬಲವಾಗಿ ಪೆಟ್ಟು ಬಿದ್ದಿತ್ತು. ಇದರಿಂದ ರಕ್ತಸ್ರಾವವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸಣ್ಣ ಶಸ್ತ್ರಚಿಕಿತ್ಸೆ ನಡೆಸಿದ್ದರು. ಲಾಸ್ ಏಂಜಲೀಸ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವ ಶಾರೂಖ್ ಭಾರತಕ್ಕೆ ವಾಪಸ್ ಆಗಿದ್ದಾರೆ. ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚು ಮಾಹಿತಿ ನೀಡಿಲ್ಲವಾದರೂ, ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಜವಾನ್ ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಲಿದೆ. ಸದ್ಯದಲ್ಲೇ ಟೀಸರ್ ಹೊರ ಬರಲಿದೆ. ಜುಲೈ 7 ಅಥವಾ 15ರಂದು ಜವಾನ್ ಟೀಸರ್‌ನ ಗ್ರ್ಯಾಂಡ್ ಲಾಂಚ್ಗಾಗಿ ಸಿದ್ಧತೆಗಳು ನಡೆಯುತ್ತಿವೆ.
ಇದನ್ನೂ ಓದಿ:Shah Rukh Khan: ಶೂಟಿಂಗ್ ವೇಳೆ ಗಾಯಗೊಂಡ ಶಾರುಖ್ ಖಾನ್, ಯಶಸ್ವಿ ಶಸ್ತ್ರಚಿಕಿತ್ಸೆ