ಬೆಂಗಳೂರು: ಬ್ರಿಟನ್ ಪ್ರಧಾನಿ ತಾಯಿ ಉಷಾ ಸುನಕ್ ರಿಂದ ಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕ ಪೂಜೆ..
Published : Sep 10, 2023, 4:35 PM IST
|Updated : Sep 10, 2023, 5:51 PM IST
ಬೆಂಗಳೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ತಾಯಿ ಉಷಾ ಸುನಕ್ ಅವರು ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆ ಕಳೆದ ಒಂದು ವಾರದಿಂದ ಚಿಕ್ಕಪೇಟೆ ಶಾಸಕ ಡಾ. ಉದಯ್ ಬಿ ಗರುಡಾಚಾರ್ ಅವರ ನಿವಾಸದಲ್ಲಿ ಕೃಷ್ಣನ ವಿವಿಧ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಉಷಾ ಸುನಕ್ ಅವರು ಶನಿವಾರ ರಾತ್ರಿ ಗರುಡಾಚಾರ್ ಮನೆಗೆ ಭೇಟಿ ನೀಡಿ ಕೃಷ್ಣನ ವೈಶಿಷ್ಟ್ಯಗಳನ್ನು ಕಣ್ತುಂಬಿಕೊಂಡರು.
ಬಳಿಕ ಉಷಾ ಅವರು ಸಾಂಪ್ರದಾಯಿಕವಾಗಿ ಶ್ರೀ ಕೃಷ್ಣನಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಅಧ್ಯಕ್ಷೆ ಡಾ. ಸುಧಾಮೂರ್ತಿ, ಡಾ. ಉದಯ್ ಬಿ ಗರುಡಾಚಾರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ವಿ. ಮಂಜುನಾಥ್ ಸೇರಿದಂತೆ ವಿವಿಧ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಕುಟುಂಬ ಸಮೇತರಾಗಿ ಭಾರತಕ್ಕೆ ಬಂದ ರಿಷಿ ಸುನಕ್:ದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಕುಟುಂಬ ಸಮೇತರಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ. ದೆಹಲಿಗೆ ಆಗಮಿಸಿದ ಉಷಾ ಸುನಕ್ ಅವರು ಬೆಂಗಳೂರಿನ ತಮ್ಮ ಬೀಗರ ಮನೆಗೆ ಬಂದಿದ್ದಾರೆ.
ಇದನ್ನೂ ಓದಿ:ಜಿ20: ದೆಹಲಿಯ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ