ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು - ಸಿರುಗುಪ್ಪ ಪೊಲೀಸರು
ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ರಸ್ತೆ ಡಿವೈಡರ್ ದಾಟಲು ಹೋಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರ್ ಗುದ್ದಿದೆ. ಆದರೆ ಕಾರು ಚಾಲಕ ಬೈಕ್ ಸವಾರನಿಗೆ ಗುದ್ದಿ ಯಾವುದೇ ಮಾನವೀಯತೆ ತೋರಿಸದೆ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಸುಮಾರು 10-12 ಅಡಿ ಮೇಲೆ ಹಾರಿ ಬೈಕ್ ಚೂರುಚೂರಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕೊತ್ತಲಚಿಂತ ಗ್ರಾಮದ ಹನುಮರೆಡ್ಡಿ(62) ಎಂದು ಗುರುತಿಸಲಾಗಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಡಿಕ್ಕಿಯಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಕಾರನ್ನು ಸಿರುಗುಪ್ಪದಿಂದ 30 ಕಿಲೋಮೀಟರ್ ದೂರದಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಆ ಕಾರನ್ನು ಸಿರುಗುಪ್ಪ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.
Last Updated : Feb 3, 2023, 8:34 PM IST