ಹಾವೇರಿ: ತಾಂತ್ರಿಕ ದೋಷದಿಂದ ಧಗಧಗನೆ ಹೊತ್ತಿ ಉರಿದ ಕಾರು - ಚಾಲಕ ಪಾರು - ಹಾವೇರಿಯಲ್ಲಿ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು
ಹಾವೇರಿ: ತಾಂತ್ರಿಕ ದೋಷದಿಂದ ಕಾರೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಕುಣಿಮೆಳ್ಳಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಹುಬ್ಬಳ್ಳಿಯಿಂದ ಹಾವೇರಿಯತ್ತ ಬರುತ್ತಿದ್ದ ಕಾರು ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ. ಹೀಗಾಗಿ, ಚಾಲಕ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಕೆಎ 26 ಪಾಸಿಂಗ್ ಇರುವ ಕಾರು ಎಂದು ತಿಳಿದುಬಂದಿದೆ.
Last Updated : Feb 3, 2023, 8:24 PM IST