ನೋಯ್ಡಾದಲ್ಲಿ ಯುವಕನಿಗೆ ಡಿಕ್ಕಿ ಹೊಡೆದ ಕಾರು : ವಿಡಿಯೋ - ಅಲ್ಡಿಕೋ ಸೊಸೈಟಿ
Published : Nov 13, 2023, 7:12 PM IST
ನವದೆಹಲಿ/ಗ್ರೇಟರ್ ನೋಯ್ಡಾ: ಗ್ರೆನೋ ವೆಸ್ಟ್‌ನ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಕಾರು ಸವಾರನೊಬ್ಬ ಅತಿವೇಗದಲ್ಲಿ ಯುವಕನಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಬಿಸ್ರಖ್ ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ. ಆರೋಪಿ ಕಾರು ಸವಾರನನ್ನು ಶೋಧಿಸಲಾಗುತ್ತಿದೆ. ಯುವಕನಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗೌರ್ ಸಿಟಿ 2ರ ಏಳನೇ ಅಡ್ಡರಸ್ತೆಯ ಹೊರಗೆ ಭಾನುವಾರ ತಡರಾತ್ರಿ ಬಿಳಿ ಕಾರಿನ ಚಾಲಕ ರಸ್ತೆ ಬದಿಯಲ್ಲಿದ್ದ ಯುವಕನಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ವಾಹನದೊಂದಿಗೆ ಪರಾರಿಯಾಗಿದ್ದಾನೆ ಎಂದು ಬಿಸ್ರಖ್ ಪೊಲೀಸರು ಮಾಹಿತಿ ನೀಡಿದ್ದಾರೆ. ಅಕ್ಕಪಕ್ಕದ ಜನರು ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದೂರಿನ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸಮೀಪದ ಸಿಸಿಟಿವಿ ಸ್ಕ್ಯಾನ್ ಮಾಡುವ ಮೂಲಕ ಕಾರಿನಲ್ಲಿದ್ದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ನೋಯ್ಡಾದ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಡಿಕೋ ಸೊಸೈಟಿಯ ಹೊರಗೆ ಪಟಾಕಿ ಸಿಡಿಸುತ್ತಿದ್ದ ಮೂವರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದು ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ಗೆ ಕಾರು ಡಿಕ್ಕಿ: ಎದೆ ಝಲ್ಲೆನಿಸುವ ವಿಡಿಯೋ