ವೃದ್ಧನಿಗೆ ಡಿಕ್ಕಿ ಹೊಡೆದ ಬೈಕ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಬುಲೆಟ್ ಬೈಕ್ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡ ಘಟನೆ ಸೆ 29ರಂದು ಮಧ್ಯಾಹ್ನ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಬೈಕ್ ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಪರಿಣಾಮ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಯ ನಿವೃತ್ತ ಉದ್ಯೋಗಿ ಹನುಮಂತನ್ ಎಂಬುವವರ ಕಾಲು, ಮುಖಕ್ಕೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಜಾಪುರ ರಸ್ತೆಯ ಸಲಾರ್ ಪುರಿಯಾ ಅಪಾರ್ಟ್‌ಮೆಂಟ್ ಮುಂಭಾಗದ ರಸ್ತೆಯ ಇನ್ನೊಂದು ಭಾಗದಲ್ಲಿದ್ದ ತಮ್ಮ ಸ್ನೇಹಿತನಿಗೆ ಹೆಲ್ಮೆಟ್ ನೀಡಲು ಹನುಮಂತನ್ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ಅವರನ್ನ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಬಳಿಕ ಸವಾರ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಚ್ಎಸ್ಆರ್ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:28 PM IST