ಸಾಲದ ಹೊರೆ - ತೆರಿಗೆ ಭಾರ ಬೇಡ.. ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಗಡಿ ಜಿಲ್ಲೆ ಜನ ಏನಂಥಾರೆ..!?
ಚಾಮರಾಜನಗರ : ಈ ಬಾರಿಯ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಿತ್ತು. ಬಳಿಕ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ಕರೆದು ಎಲ್ಲ ಐದು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದರು.
ಇದನ್ನೂ ಓದಿ :ಪದವಿ ಪೂರೈಸಿ 180 ದಿನಗಳವರೆಗೆ ಮನೆಯಲ್ಲೇ ಇದ್ದವರಿಗೆ ಯುವನಿಧಿ: ತೃತೀಯ ಲಿಂಗಿಗಳಿಗೂ ಅನ್ವಯ!
ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಘೋಷಣೆ ಆಗುತ್ತಿದ್ದಂತೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಕೆಲವರು ಸಾಲದ ಹೊರೆ, ತೆರಿಗೆ ಭಾರವನ್ನು ಜನರಿಗೆ ಹೊರಿಸಬೇಡಿ ಎಂದು ಸರ್ಕಾರಕ್ಕೆ ಮನವಿಯನ್ನು ಮಾಡಿಕೊಂಡಿದ್ದಾರೆ. ಈ ವೇಳೆ, ಐದು ಗ್ಯಾರಂಟಿಗಳನ್ನು ಜಾರಿಗೆ ತಂದ ಸಿದ್ದರಾಮಯ್ಯ ಅವರನ್ನು ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಮಂದಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ :ಜೂ.11 ರಿಂದ ಬಸ್ ಪ್ರಯಾಣ ಫ್ರೀ..ಫ್ರೀ.. ನನ್ನ ಹೆಂಡತಿಗೂ ಉಚಿತ, ರಾಜ್ಯದ ಮುಖ್ಯ ಕಾರ್ಯದರ್ಶಿಗೂ ಉಚಿತ ಎಂದ ಸಿಎಂ