ಕೋಟಿ ಒಡೆಯ ಮಾದಪ್ಪ: 36 ದಿನಕ್ಕೆ ಹುಂಡಿಯಲ್ಲಿ 2.38 ಕೋಟಿ ರೂ. ಸಂಗ್ರಹ - ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆ
Published : Sep 2, 2023, 7:12 AM IST
ಚಾಮರಾಜನಗರ : ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 2.38 ಕೋಟಿ ರೂ. ಹಣ ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸರಿಸುಮಾರು 12 ಗಂಟೆಗಳ ಕಾಲ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿ 36 ದಿನಗಳ ಅವಧಿಗೆ 2,38,43,177 ರೂ. ನಗದು ಸಂಗ್ರಹವಾಗಿದೆ. ಹಾಗೆಯೇ, ಭಕ್ತರು 63 ಗ್ರಾಂ ಚಿನ್ನ ಹಾಗೂ 3.173 ಕೆಜಿ ಬೆಳ್ಳಿಯನ್ನು ದೇವರಿಗೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿಯನ್ನು ಹುಂಡಿಗೆ ಹಾಕಿದ್ದಾರೆ.
ಇದನ್ನೂ ಓದಿ :ಅಮಾವಾಸ್ಯೆ : ನಿರೀಕ್ಷೆಗೂ ಮೀರಿ ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು, ಬಿಸಿಲಿನಲ್ಲೂ ವಿವಿಧ ಉತ್ಸವ