ಚಂದ್ರಗುತ್ತಿ ಶ್ರೀ ರೇಣುಕಾಂಬ ದೇಗುಲದ ಸೀರೆ, ರವಿಕೆ ವಸ್ತ್ರಗಳು ಹರಾಜು: 4.90 ಲಕ್ಷ ರೂ. ಸಂಗ್ರಹ - Chandragutti Renukamba Temple
ಶಿವಮೊಗ್ಗ : ರಾಜ್ಯದ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇಗುಲಕ್ಕೆ ಭಕ್ತರಿಂದ ಹರಕೆ ರೂಪದಲ್ಲಿ ಬಂದಂತಹ ಸೀರೆ ಮತ್ತು ರವಿಕೆ ವಸ್ತ್ರಗಳನ್ನು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಾರ್ವಜನಿಕ ಬಹಿರಂಗ ಹರಾಜು ನಡೆಸಲಾಯಿತು. ಎರಡು ವರ್ಷಗಳಿಂದ ಸಂಗ್ರಹವಾಗಿದ್ದ ಸೀರೆ ಮತ್ತು ರವಿಕೆ ವಸ್ತ್ರಗಳನ್ನು ಚಂದ್ರಗುತ್ತಿ ಪ್ರಭಾರ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಹರಾಜು ಮಾಡಲಾಯಿತು. ಹರಾಜಿನಿಂದ ಒಟ್ಟು 4.90 ಲಕ್ಷ ರೂ. ಆದಾಯ ಬಂದಿದೆ.
2021ರ ಜನವರಿ ತಿಂಗಳಲ್ಲಿ ಸೀರೆ ಮತ್ತು ರವಿಕೆ ವಸ್ತ್ರಗಳನ್ನು ಹರಾಜು ಮಾಡಿದಾಗ 4.70 ಲಕ್ಷ ರೂ. ಸಂಗ್ರಹವಾಗಿತ್ತು. ಹರಾಜು ಪ್ರಕ್ರಿಯೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ಸದಸ್ಯರಾದ ಶಿವಶಂಕರ್ ಗೌಡ್ರು, ವೆಂಕಟೇಶ್, ಪ್ರಮುಖರಾದ ಪರಶುರಾಮ್ ಬೋವಿ, ಗಣೇಶ್ ಮರಡಿ, ಸದಾನಂದ ಕಾಮತ್, ದಿನೇಶ್ ಅಂಚೆ, ಚಂದನ್ ಸೇರಿದಂತೆ ದೇವಸ್ಥಾನದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ :ಶಿವಮೊಗ್ಗ : ಚಂದ್ರಗುತ್ತಿ ದೇವಾಲಯದ ಹುಂಡಿ ಎಣಿಕೆ, ₹29 ಲಕ್ಷ ಸಂಗ್ರಹ