ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇಗುಲದ ಹುಂಡಿ ಎಣಿಕೆ: 18 ಲಕ್ಷ ರೂ. ಸಂಗ್ರಹ - ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ದೇವಾಲಯ
ಶಿವಮೊಗ್ಗ: ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಿನ್ನೆ(ಗುರುವಾರ) ನಡೆಯಿತು. ಚಂದ್ರಗುತ್ತಿ ನಾಡಕಚೇರಿಯ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ವಿ.ಎಲ್.ಶಿವಪ್ರಸಾದ್ ಅವರ ಸಮ್ಮುಖದಲ್ಲಿ ದೇವಾಲಯದ ಆಡಳಿತ ಕಚೇರಿಯಲ್ಲಿ ಹುಂಡಿ ಎಣಿಕೆ ಮಾಡಲಾಯಿತು.
ಇದನ್ನೂ ಓದಿ : ಸೊರಬ: ಚಂದ್ರಗುತ್ತಿ ರೇಣುಕಾಂಬ ದೇವಾಲಯದ ಹುಂಡಿ ಎಣಿಕೆ, ₹25 ಲಕ್ಷ ಸಂಗ್ರಹ
ಈ ಬಾರಿ 18,56,210 ರೂ. ಕಾಣಿಕೆ ಸಂಗ್ರಹವಾಗಿದೆ. ಹಣ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳು, ಮುಜರಾಯಿ ಇಲಾಖೆಯ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು. ಕಳೆದ ಫೆಬ್ರವರಿ ತಿಂಗಳಲ್ಲಿ ಸಹ ಹುಂಡಿ ಹಣ ಎಣಿಕೆ ಮಾಡಲಾಗಿತ್ತು. ಆಗ ಸುಮಾರು 25,67,710 ರೂ. ಸಂಗ್ರಹವಾಗಿತ್ತು. ಪ್ರತಿ ಮೂರು ತಿಂಗಳಿಗೊಮ್ಮೆ ಎಣಿಕೆ ಕಾರ್ಯ ನಡೆಸಲಾಗುತ್ತದೆ.
ಇದನ್ನೂ ಓದಿ :ಮಲೆಮಹದೇಶ್ವರ ದೇಗುಲದ ಹುಂಡಿ ಎಣಿಕೆ: 22 ದಿನಕ್ಕೆ 1.82 ಕೋಟಿ ರೂಪಾಯಿ ಸಂಗ್ರಹ