Chandrayaan -3 : ಜುಲೈ 14ರ ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ..ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ - Chandrayaan 3
ಬೆಂಗಳೂರು: ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಉಡಾವಣೆ ಆಗಲಿದೆ ಎಂದು ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ ಅವರು ತಿಳಿಸಿದ್ದಾರೆ. ನಗರದಲ್ಲಿ ಚಂದ್ರಯಾನ-3 ಉಡಾವಣೆ ಕುರಿತ ಜಿ 20 ಬಾಹ್ಯಾಕಾಶ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ -3 ಉಡಾವಣೆಯಾಗುತ್ತದೆ. ಎಲ್ಲವೂ ಸರಿಯಾಗಿ ನಡೆದರೆ ಆಗಸ್ಟ್ 23ರಂದು ಚಂದ್ರನ ಮೇಲೆ ರೋವರ್ ಇಳಿಯಲಿದೆ ಎಂದು ತಿಳಿಸಿದರು.
ಚಂದ್ರನ ಮೇಲೆ ಯಾವಾಗ ಇಳಿಯಬೇಕು ಎಂಬುದನ್ನು ಸೂರ್ಯನ ಬೆಳಕನ್ನು ಆಧರಿಸಿ ನಿರ್ಧರಿಸಲಾಗುತ್ತದೆ. ಚಂದ್ರನ ಮೇಲೆ 15 ದಿನ ರಾತ್ರಿ, 15 ದಿನ ಹಗಲು ಇರುವುದರಿಂದ, ವಿವಿಧ ಲೆಕ್ಕಾಚಾರಗಳ ಮೇಲೆ ಚಂದ್ರನ ಮೇಲೆ ರೋವರ್ ಇಳಿಸಲಾಗುತ್ತದೆ. ಇದು ತಡವಾದರೆ ನಾವು ಸೆಪ್ಟೆಂಬರ್ ತಿಂಗಳವರೆಗೆ ಕಾಯಬೇಕಾಗುತ್ತದೆ ಎಂದು ಹೇಳಿದರು. ಬಹುನಿರೀಕ್ಷಿತ ಚಂದ್ರಯಾನ-3 ನೌಕೆಯನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-III ಮೂಲಕ ಉಡಾವಣೆ ಮಾಡಲಾಗುತ್ತದೆ.
ಇದನ್ನೂ ಓದಿ :ಮೂತ್ರ ವಿಸರ್ಜನೆ ಪ್ರಕರಣ: ಸಂತ್ರಸ್ತ ವ್ಯಕ್ತಿಯ ಪಾದ ತೊಳೆದು, ಕ್ಷಮೆ ಕೇಳಿದ ಮಧ್ಯಪ್ರದೇಶ ಸಿಎಂ: ವಿಡಿಯೋ