ಸಿನಿಮೀಯ ರೀತಿಯಲ್ಲಿ ಆಟೋ ಪಲ್ಟಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ - NR pura
ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿರುವ ಘಟನೆ ಇಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಳೆಹೊನ್ನೂರು ಪಟ್ಟಣದ ವಿನಾಯಕ ರೈಸ್ ಮಿಲ್ ಬಳಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲುವೆಯಲ್ಲಿ ಮುಳುಗಿ ಮೂವರು ಸಾವು: ಕಾಲುವೆಯ ಬಳಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದವರನ್ನು ಕಾಪಾಡಲು ಹೋಗಿ ಒಬ್ಬೊಬ್ಬರಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ರವಿ (31), ಅನನ್ಯ (17) ಹಾಗೂ ಶಾಮವೇಣಿ (16) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಆಸಿಸ್ನಲ್ಲಿ ಭಾರತದ ವೈವಿಧ್ಯತೆಯ ಸಾಂಸ್ಕೃತಿಕ ಪ್ರದರ್ಶನ: ಒಂಬತ್ತು ವರ್ಷಗಳ ಬಳಿಕ ಕಾಂಗರೂ ನಾಡಿಗೆ ಮೋದಿ ಭೇಟಿ