ಹುಬ್ಬಳ್ಳಿ ಎಪಿಎಂಸಿಯಲ್ಲಿ ಝಳಪಿಸಿದ ಮಾರಕಾಸ್ತ್ರ.. ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಿಗಳ ಮಧ್ಯೆ ಮಾರಾಮಾರಿ - ETV Bharath Kannada news
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳು ಝಳಪಿಸಿವೆ. ಕ್ಷುಲ್ಲಕ ಕಾರಣಕ್ಕೆ ತರಕಾರಿ ಮಾರುತ್ತಿದ್ದವರಲ್ಲಿ ಕೆಲವರು ಏಕಾಏಕಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ನಗರದ ಎಪಿಎಂಸಿಯಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.
ವ್ಯಾಪಾರದ ವಿಷಯಕ್ಕೆ ಮೂವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿಕೊಂಡಿದ್ದು, ಒಂದು ಕ್ಷಣ ಮಾರುಕಟ್ಟೆ ರಣಾಂಗಣವಾಗಿತ್ತು. ಸ್ಥಳೀಯರು ಬಂದು ಇವರ ಜಗಳವನ್ನು ಬಿಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಲ್ಲೆಗೆ ಒಳಗಾದವರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಶ್ರದ್ಧಾ ವಾಕರ್ ಹತ್ಯೆ ಕೇಸ್: 3 ಸಾವಿರ ಪುಟಗಳ ಚಾರ್ಜ್ಶೀಟ್, 100 ಸಾಕ್ಷಿಗಳು ದಾಖಲು