ಸಿದ್ಧಾರೂಢ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಸಿದ್ಧಾರೂಢ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಶ್ರೀಗಳ ಗದ್ದುಗೆ ಪೂಜೆ - ಸಿಎಂ ಬೊಮ್ಮಾಯಿ ಭೇಟಿ
ಹುಬ್ಬಳ್ಳಿ:ಉತ್ತರ ಕರ್ನಾಟಕದ ಆರಾಧ್ಯ ದೈವ ಸದ್ಗುರು ಸಿದ್ಧಾರೂಢ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಮಹಾಶಿವರಾತ್ರಿ ಅಂಗವಾಗಿ ಸಿದ್ಧಾರೂಢರ ಜಾತ್ರೆ ನಡೆಯುತ್ತಿದೆ. ಸಿದ್ಧಾರೂಢ ಹಾಗೂ ಗುರುನಾಥರೂಢರ ಗದ್ದುಗೆಗೆ ಸಿಎಂ ವಿಶೇಷ ಪೂಜೆ ಸಲ್ಲಿಸಿದರು. ಶಿವರಾತ್ರಿಯ ಅಂಗವಾಗಿ ತವರಿಗೆ ಆಗಮಿಸಿದ ಸಿಎಂ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಮಠದ ಟ್ರಸ್ಟ್ ಕಮಿಟಿಯೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.
ಇದನ್ನೂ ಓದಿ:ಸುಸ್ಥಿರ ಗಣಿಗಾರಿಕೆ ಕಲ್ಲು ಉದ್ಯಮದ ದೊಡ್ಡ ಹೊಣೆಗಾರಿಕೆ: ಸಿಎಂ ಬಸವರಾಜ ಬೊಮ್ಮಾಯಿ