ಕರ್ನಾಟಕ

karnataka

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ETV Bharat / videos

ಚಾಮರಾಜನಗರ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನಮರ

By

Published : Mar 16, 2023, 10:44 AM IST

ಚಾಮರಾಜನಗರ: ಸಿಡಿಲು ಬಡಿದು ತೆಂಗಿನ ಮರವೊಂದು ಧಗಧಗನೆ ಹೊತ್ತಿ ಉರಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಗ್ರಾಮದ ಕೃಷ್ಣಶೆಟ್ಟಿ ಎಂಬುವರ ಜಮೀನಿನಲ್ಲಿ ಘಟನೆ ಜರುಗಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬುಧವಾರ ಸಂಜೆ ಸಾಮಾನ್ಯ ಮಳೆಯಾಗುತ್ತಿದ್ದ ವೇಳೆ ಸಿಡಿಲು ಬಡಿದು ತೆಂಗಿನ ಮರ ಸಂಪೂರ್ಣ ಸುಟ್ಟು ಕರಕಲಾಗಿದೆ. ಜಿಲ್ಲೆಯ ಹಲವೆಡೆ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಳೆ ತಂಪಾಗುತ್ತಿದೆ. ಬಿಸಿಲಿಗೆ ಕಂಗೆಟ್ಟಿದ್ದ ಜನತೆ ಕೊಂಚ ರಿಲ್ಯಾಕ್ಸ್​ ಆಗಿದ್ದಾರೆ. 

ಇದನ್ನೂ ಓದಿ :ಶಿವಮೊಗ್ಗದಲ್ಲಿ ಉತ್ತಮ ಮಳೆ..ಸಂತಸಗೊಂಡ ಜನ

ಹವಾಮಾನ ವೈಪರೀತ್ಯದಿಂದಾಗಿ ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಹಾಗೆಯೇ, ರಾಜ್ಯದೆಲ್ಲೆಡೆ ಸಾಧಾರಣ ಮಳೆಯಾಗಲಿದೆ. ಇದೇ ವೇಳೆ ಬಹುತೇಕ ಕಡೆ ಬಿಸಿಲ ಧಗೆ ಹೆಚ್ಚುತ್ತಿದ್ದು, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ. ಇತ್ತೀಚೆಗೆ ಕೊಡಗು, ಶಿವಮೊಗ್ಗದಲ್ಲಿ ತುಂತುರು ಮಳೆಯಾಗಿತ್ತು.

ಇದನ್ನೂ ಓದಿ:ಬೆಂಗಳೂರಿಗೆ ಇಂದಿನಿಂದ 3 ದಿನ ಮಳೆ ಮುನ್ಸೂಚನೆ 

ABOUT THE AUTHOR

...view details