ಕರ್ನಾಟಕ

karnataka

ETV Bharat / videos

"ರಂಜಿತಮೇ" ಹಾಡಿಗೆ ಡ್ಯಾನ್ಸ್​​​ ಮಾಡಿದ ಜಿಲ್ಲಾಧಿಕಾರಿ ಕವಿತಾ ರಾಮು - ವಿಡಿಯೋ - ಈಟಿವಿ ಭಾರತ ಕನ್ನಡ

🎬 Watch Now: Feature Video

"ರಂಜಿತಮೇ" ಹಾಡಿಗೆ ಡ್ಯಾನ್ಸ್​​​ ಮಾಡಿದ ಜಿಲ್ಲಾಧಿಕಾರಿ ಕವಿತಾ ರಾಮು - ವಿಡಿಯೋ

By

Published : Mar 11, 2023, 4:23 PM IST

ಪುದುಕೊಟೈ  (ತಮಿಳುನಾಡು):  ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಶ್ವಾದಾದ್ಯಂತ ಆಚರಿಸಲಾಗುತ್ತದೆ.  ತಮಿಳುನಾಡಿನ ಪುದುಕೊಟೈ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ರಾಮು ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ  ಜಿಲ್ಲಾಧಿಕಾರಿ ಕವಿತಾ ರಾಮು ಅವರು ಸರ್ಕಾರಿ ಅಧಿಕಾರಿಗಳ ಜೊತೆ ಮಹಿಳಾ ದಿನಾಚರಣೆಯನ್ನು ಆಚರಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಸಿನಿಮಾ ಹಾಡಿಗೆ  ಅಧಿಕಾರಿಗಳು ಭರ್ಜರಿಯಾಗಿ ನೃತ್ಯ ಮಾಡಿದರು. ಈ ವೇಳೆ ಅಧಿಕಾರಿಗಳಿಗೆ ಸಾತ್​ ನೀಡಿದ ಜಿಲ್ಲಾಧಿಕಾರಿ ಕವಿತಾ ರಾಮು ರಂಜಿತಮೇ ಹಾಡಿಗೆ ನೃತ್ಯ ಮಾಡುವ ಮೂಲಕ ಎಲ್ಲರನ್ನು ರಂಜಿಸಿದರು.

ಇದಕ್ಕೂ ಮೊದಲು ಮಹಿಳಾ ದಿನಾಚರಣೆ ಹಿನ್ನೆಲೆ ವಿವಿಧ  ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಳಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಂದಾಯ ಅಧಿಕಾರಿ ಎಂ.ಎಸ್.ಪೆರಿಯಸಾಮಿ, ಸಹ ಕೃಷಿ ನಿರ್ದೇಶಕರು, ಜಿಲ್ಲಾ ಅಭಿವೃದ್ಧಿ ಸಂಸ್ಥೆ ನಿರ್ದೇಶಕಿ ಕವಿತಪ್ರಿಯ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬಾಗಲಕೋಟೆ: ಮುಳುಗಡೆ ನಗರಿಯಲ್ಲಿ ಹೋಳಿ ರಂಗು

ABOUT THE AUTHOR

...view details