ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಪದಗ್ರಹಣ: ತವರು ಜಿಲ್ಲೆ ಕಲಬುರಗಿಯಲ್ಲಿ ಕಾರ್ಯಕರ್ತರ ಸಂಭ್ರಮ - Sardar Vallabhbhai Patel
ದೇಶದ ಅತಿದೊಡ್ಡ ಪಕ್ಷವಾದ ಎಐಸಿಸಿ ನೂತನ ಅಧ್ಯಕ್ಷರಾಗಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇತ್ತ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಬೃಹತ್ ಗಾತ್ರದ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಅಲ್ಲದೆ, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿಕೊಂಡು ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಖರ್ಗೆ ಪರವಾಗಿ ಘೋಷಣೆ ಕೂಗಿದರು. ಖರ್ಗೆ ಅವರ ಸ್ವಾಭಿಮಾನಕ್ಕೆ ಸಿಕ್ಕ ಜಯ ಇದಾಗಿದೆ. ತಮಗೆ ಸಿಕ್ಕ ಮಹತ್ತರವಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂಬ ವಿಶ್ವಾಸವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.
Last Updated : Feb 3, 2023, 8:30 PM IST