ಕರ್ನಾಟಕ

karnataka

ಅಕ್ಕಿ ನಿರಾಕರಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ETV Bharat / videos

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

By

Published : Jun 16, 2023, 8:01 PM IST

ಬೆಂಗಳೂರು :ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯಅನ್ನಭಾಗ್ಯ ಯೋಜನೆಗೆ ಎಫ್‌ಸಿಐ ಅಕ್ಕಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಇಂದು ಪ್ರತಿಭಟನೆ ನಡೆಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿ ಸೇರಿದ ಕಾರ್ಯಕರ್ತರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಇದನ್ನೂ ಓದಿ:ಮಹಿಳಾ ಪ್ರಯಾಣಿಕರನ್ನು ಹತ್ತಿಸಿಕೊಳ್ಳದೇ ಮುಂದೆ ಸಾಗಿದ ಚಾಲಕ.. ನಮ್ಮ ಮೇಲೆ ಬಸ್​ ಹರಿಸುವ ಯತ್ನ ಎಂದು ಮಹಿಳೆಯರ ಆಕ್ರೋಶ!

ಪ್ರಧಾನಿ ಮೋದಿ ಅನ್ನ ಬೇಯಿಸುತ್ತಿರುವಂತೆ ಅಣಕು ಪ್ರದರ್ಶನ ಮಾಡಿದರು. ಇದೇ ವೇಳೆ ಮೋದಿ ಭಕ್ತರು ಅನ್ನ ಬೇಯಿಸುತ್ತಿರುವಂತೆ ಪ್ರದರ್ಶಿಸಿದರು. ಪ್ರಧಾನಿಗೆ ಧಿಕ್ಕಾರ ಕೂಗಿದರು.

ಇದನ್ನೂ ಓದಿ:ಸರ್ಕಾರಿ ಬಸ್​ಗಳೆಲ್ಲ ರಶ್ ರಶ್.. ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ: ವಿಡಿಯೋ

ಮಂಗಳವಾರ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಜಿಲ್ಲಾ ಕೇಂದ್ರಗಳಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಕಾಂಗ್ರೆಸ್‌ ಪಕ್ಷವೂ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನರಿಗೆ ಪ್ರಮುಖವಾಗಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಈ ಪೈಕಿ ಬಿಪಿಎಲ್‌ ವರ್ಗದವರಿಗೆ 10 ಕೆಜಿ ಅಕ್ಕಿ ವಿತರಣೆಯೂ ಮಹತ್ವದ್ದಾಗಿದೆ. ಇದನ್ನು ಜಾರಿಗೊಳಿಸಲು ಭಾರತೀಯ ಆಹಾರ ನಿಗಮಕ್ಕೆ ಅಕ್ಕಿ ನೀಡಲು ಮನವಿ ಮಾಡಿತ್ತು.

ಇದನ್ನೂ ಓದಿ:'ಅನ್ನಭಾಗ್ಯ ಯೋಜನೆ'ಯಡಿ ಅಕ್ಕಿ ನೀಡಲು ನಿರಾಕರಣೆ.. ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: DCM

ABOUT THE AUTHOR

...view details