ಸಿದ್ದರಾಮಯ್ಯ ತಂಗಿದ್ದ ಹೋಟೆಲ್ ಮುಂದೆ ಕೈ ಕಾರ್ಯಕರ್ತರ ಪ್ರತಿಭಟನೆ- ವಿಡಿಯೋ - congress activists protest
ಬೆಳಗಾವಿ: ರಾಮದುರ್ಗ ವಿಧಾನಸಭಾ ಕ್ಷೇತ್ರದ ಬಿ ಫಾರಂ ಅನ್ನು ಚಿಕ್ಕರೇವಣ್ಣರಿಗೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಂಗಿದ್ದ ಹೋಟೆಲ್ ಮುಂಭಾಗ ತಡರಾತ್ರಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ, ಅಶೋಕ್ ಪಟ್ಟಣಗೆ ಟಿಕೆಟ್ ನೀಡಬಾರದು, ರಾಮದುರ್ಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಿಕ್ಕರೇವಣ್ಣಗೆ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು.
ಚಿಕ್ಕರೇವಣ್ಣ ರಾಮದುರ್ಗ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ಸಾರ್ವತ್ರಿಕ ಚುನಾವಣೆಯಿಂದ ಟಿಕೆಟ್ ಕೇಳುತ್ತಿದ್ದಾರೆ. ರಾಮದುರ್ಗದಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಇದನ್ನೂ ಓದಿ:ಸರ್ಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಲಾಗುತ್ತಿದೆ: ಸಿದ್ದರಾಮಯ್ಯ ವಾಗ್ದಾಳಿ