ಚುನಾವಣೆಗಾಗಿ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿವೆ: ಶೋಭಾ ಕರಂದ್ಲಾಜೆ - shivamogga inident
ಚಿಕ್ಕೋಡಿ (ಬೆಳಗಾವಿ):ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಎಸ್ಡಿಪಿಐ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ದೇಶದಲ್ಲಿ ಪಿಎಫ್ಐ ಸಂಘಟನೆಯ ನಿಷೇಧದ ಬಳಿಕ ಅದರ ಕಾರ್ಯಕರ್ತರು ಎಸ್ಡಿಪಿಐ (SDPI)ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬರುವ ಚುನಾವಣೆಗಾಗಿ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷ ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲೇ ಇದೇ ಕಾಂಗ್ರೆಸ್ ಸರ್ಕಾರ ಪಿಎಫ್ಐನ ಕಾರ್ಯಕರ್ತರನ್ನ ಜೈಲಿನಿಂದ ಬಿಡುಗಡೆ ಮಾಡಿದರು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎಂದು ಆರೋಪಿಸಿದರು. ಈ ಹಿಂದೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯನ್ನು ನಿರಪರಾಧಿ ಎಂದು ಡಿಕೆ ಶಿವಕುಮಾರ್ ಹೇಳಿದ್ದರು ಎಂದು ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ದಲಿತ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದ ಬಿಜೆಪಿ ಮುಖಂಡ.. ಮಹಿಳೆಯಿಂದ ಕಪಾಳ ಮೋಕ್ಷ