ಕರ್ನಾಟಕ

karnataka

ETV Bharat / videos

ಜಮ್ಮು ಕಾಶ್ಮೀರದ ಕಥುವಾದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಗೆ ಬಿಗಿ ಭದ್ರತೆ - congress bharat jodo yatra restarts in kathua

By

Published : Jan 22, 2023, 10:21 AM IST

Updated : Feb 3, 2023, 8:39 PM IST

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಇಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹೀರಾನಗರ ಮೋರ್‌ನಿಂದ ಪುನರಾರಂಭಗೊಂಡಿತು. ಮಧ್ಯಾಹ್ನ 12.30 ರ ಸುಮಾರಿಗೆ ಮೆರವಣಿಗೆಯು ಸಾಂಬಾದ ದುಗ್ಗರ್ ಹವೇಲಿಯಿಂದ ಸಾಗಲಿದ್ದು ಚಕ್ ನಾನಕ್ ಗ್ರಾಮದಲ್ಲಿ ರಾಹುಲ್ ರಾತ್ರಿ ತಂಗಲಿದ್ದಾರೆ. ಜಮ್ಮು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ವಿಕಾರ್ ರಸೂಲ್ ವಾನಿ, ಕಾರ್ಯಾಧ್ಯಕ್ಷ ರಮಣ್ ಭಲ್ಲಾ ಸೇರಿದಂತೆ ನೂರಾರು ಸ್ವಯಂಸೇವಕರು ತ್ರಿವರ್ಣ ಧ್ವಜ ಹಿಡಿದು ಹೆಜ್ಜೆ ಹಾಕುತ್ತಿದ್ದಾರೆ. ಪಾದಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು, ಸಿಆರ್‌ಪಿಎಫ್ ಸೇರಿದಂತೆ ಭದ್ರತಾ ಸಿಬ್ಬಂದಿ ಸಾಕಷ್ಟು ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ಜನವರಿ 30ರಂದು ಶ್ರೀನಗರದ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಭಾರತ್​ ಜೋಡೋ ಕೊನೆಗೊಳ್ಳಲಿದೆ.

ಇದನ್ನೂ ಓದಿ:ಕೊರೆವ ಚಳಿ ಮೀರಿ ಬರಿ ಮೈಯಲ್ಲಿ ಭಾರತ್​ ಜೋಡೋ ಯಾತ್ರೆ: ವಿಡಿಯೋ

Last Updated : Feb 3, 2023, 8:39 PM IST

ABOUT THE AUTHOR

...view details