ರಾಜಸ್ಥಾನ ಬಿಕ್ಕಟ್ಟು: ಸಿಎಂ ಗೆಹ್ಲೋಟ್ ಜೊತೆ ಖರ್ಗೆ, ರಾಹುಲ್ ಗಾಂಧಿ ಚರ್ಚೆ - ರಾಜಸ್ಥಾನ ವಿಧಾನಸಭಾ ಚುನಾವಣೆ
ನವದೆಹಲಿ:ರಾಜಸ್ಥಾನದಲ್ಲಿ ಇದೇ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಮಧ್ಯೆ ಬಹಿರಂಗ ಕುಸ್ತಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ಬಿಕ್ಕಟ್ಟು ಶಮನಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರೇ ಅಖಾಡಕ್ಕಿಳಿದಿದ್ದಾರೆ. ಇಂದು ಉಭಯ ನಾಯಕರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ.
ದಿಲ್ಲಿಯ ಎಐಸಿಸಿ ಅಧ್ಯಕ್ಷರ ಕಚೇರಿಗೆ ಆಗಮಿಸಿರುವ ಸಿಎಂ ಅಶೋಕ್ ಗೆಹ್ಲೋಟ್ ಅವರು, ಖರ್ಗೆ ಅವರ ಜೊತೆ ಕೆಲ ಹೊತ್ತು ಚರ್ಚೆ ನಡೆಸುತ್ತಿದ್ದಾರೆ. ಇದೇ ವೇಳೆ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಕೂಡ ಸಭೆಗೆ ಆಗಮಿಸಿದರು. ಇದಾದ ಬಳಿಕ ಖರ್ಗೆ ಅವರನ್ನು ಸಚಿನ್ ಪೈಲಟ್ ಭೇಟಿಯಾಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಚಿನ್ ಪೈಲಟ್ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಇಲ್ಲವಾದಲ್ಲಿ ಸರ್ಕಾರದ ವಿರುದ್ಧವೇ ದೊಡ್ಡಮಟ್ಟದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮೊದಲು 5 ದಿನಗಳ ಕಾಲ ಜನಸಂಘರ್ಷ ಯಾತ್ರೆ ನಡೆಸಿದ್ದರು.
ಇದನ್ನೂ ಓದಿ:ರಾಜಸ್ಥಾನದಲ್ಲಿ ಗೆಹ್ಲೋಟ್ vs ಪೈಲಟ್: ಇಬ್ಬರು ನಾಯಕರ ಬೇಡಿಕೆ ಆಲಿಸಲಿರುವ ಖರ್ಗೆ