ಕರ್ನಾಟಕ

karnataka

ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ

ETV Bharat / videos

ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ - ಕರ್ನಾಟಕ ವಿಧಾನಸಭೆ ಫಲಿತಾಂಶ

By

Published : May 13, 2023, 2:31 PM IST

ಬೆಂಗಳೂರು: ಈ ಬಾರಿ ಕಾಂಗ್ರೆಸ್​ 130 ಸ್ಥಾನಗಳನ್ನು ದಾಟುತ್ತದೆ. ಇದು ಕಾಂಗ್ರೆಸ್ ಪಕ್ಷದ ದೊಡ್ಡ ಗೆಲುವು. ಬಿಜೆಪಿ ಸರ್ಕಾರದಿಂದ ಬೇಸತ್ತು ಕರ್ನಾಟಕದ ಜನರು ಬದಲಾವಣೆ ಬಯಸಿದ್ದಾರೆ. ‘ಕಮಲ’ ಆಪರೇಷನ್‌ಗೆ ಬಿಜೆಪಿ ಸಾಕಷ್ಟು ಹಣ ಖರ್ಚು ಮಾಡಿದೆ. ರಾಹುಲ್​ ಗಾಂಧಿ ಅವರ ಭಾರತ್​ ಜೋಡೋ ಪಾದಯಾತ್ರೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿತು. ಗೆಲುವಿಗೆ ಇದು ಪ್ರಮುಖ ಕಾರಣವಾಯಿತು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  

ಇದು ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ವಿರುದ್ಧದ ಜನಾದೇಶ. ಪ್ರಧಾನಿ 20 ಬಾರಿ ಕರ್ನಾಟಕಕ್ಕೆ ಬಂದಿದ್ದರು. ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಪ್ರಚಾರ ಮಾಡಿಲ್ಲ. ಆದರೂ ಬಿಜೆಪಿಗೆ ಸೋಲಾಗಿದೆ ಎಂದು ಬಿಜೆಪಿ ಪ್ರಚಾರದ ಕುರಿತಾಗಿ ಸಿದ್ದರಾಮಯ್ಯ ಮಾತನಾಡಿದರು. 

ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಗೆ ಮೆಟ್ಟಿಲು. ಎಲ್ಲ ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಸೋಲಿಸುವುದನ್ನು ನೋಡುತ್ತೇವೆ ಮತ್ತು ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬಹುದು ಎಂದು ನಾನು ಭಾವಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ಓದಿ:ಕಾಂಗ್ರೆಸ್‌ಗೆ ಪ್ರಚಂಡ ಗೆಲುವು: ಡಿಕೆಶಿ ಭಾವುಕ ನುಡಿ- ವಿಡಿಯೋ

ABOUT THE AUTHOR

...view details