ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸ್ತೀರಾ? ನಟ ಸಾಧುಕೋಕಿಲ ಹೇಳಿದ್ದಿಷ್ಟು..
ದೊಡ್ಡಬಳ್ಳಾಪುರ (ಬೆಂ.ಗ್ರಾ): ಹಾಸ್ಯನಟ ಸಾಧುಕೋಕಿಲ ಅವರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, "ಹಾಗೆಲ್ಲ ಯಾವ ಸುದ್ದಿಯೂ ಇಲ್ಲ. ನಮಗೆ ಏನ್ ಕೆಲ್ಸ ಹೇಳ್ತಾರೋ ಅಷ್ಟು ಮಾಡಿಕೊಂಡು ಹೋದರೆ ಸಾಕು. ನಾವು ಕಲಾವಿದರು" ಎಂದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದು ಜನರ ಧ್ವನಿಯಾಗಿ ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ ಸಮಾವೇಶ ಅಯೋಜಿಸಿದೆ. ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಗಣ್ಯರ ವೇದಿಕೆ ಸೇರಿದಂತೆ, 55 ಸಾವಿರ ಆಸನ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಸಕಲ ಸಿದ್ಧತೆ ಮಾಡಲಾಗುತ್ತಿದೆ.
ಹಾಸ್ಯನಟ ಮತ್ತು ಸಂಗೀತ ನಿರ್ದೇಶಕ ಸಾಧುಕೋಕಿಲ, ನಟಿ ಉಮಾಶ್ರಿ ಅವರಿಂದ ರಸಮಂಜರಿ ಕಾರ್ಯಕ್ರಮವಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗಿಯಾಗಲಿದ್ದಾರೆ ಎಂದರು.