ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂ ತಡೆ; ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ - ಈಟಿವಿ ಭಾರತ್ ಕನ್ನಡ ನ್ಯೂಸ್
ಶಿವಮೊಗ್ಗ :ಕಾಂಗ್ರೆಸ್ ನಾಯಕರಾಹುಲ್ ಗಾಂಧಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರಿಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಭವನದ ಮುಂಭಾಗ ಪಕ್ಷದ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು.
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದಾದ ಬಳಿಕ ಸಂಸತ್ ಸದಸ್ಯ ಸ್ಥಾನ ಅನರ್ಹಗೊಂಡಿತ್ತು. ಈ ಬಗ್ಗೆ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದ ರಾಹುಲ್ ಗಾಂಧಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ.
ಕಾಂಗ್ರೆಸ್ ಮುಖಂಡರಾದ ಚಂದ್ರಭೂಪಾಲ್, ವಿಜಯ್ ಕುಮಾರ್,ಎನ್. ರಮೇಶ್, ಚೇತನ್, ಸುವರ್ಣ ನಾಗರಾಜ್, ಕಲೀಂ ಪಾಷಾ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ :Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ