ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ - Cricketer KL Rahul come to mangaluru
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಭಾರತದ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರ ಹಾಗೂ ತಂಡದ ಉಪನಾಯಕ ಮಂಗಳೂರು ಮೂಲದ ಕೆ ಎಲ್ ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು, ಪ್ರಾರ್ಥನೆ ಸಲ್ಲಿಸಿದ ನಂತರ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಕೆ ಎಲ್ ರಾಹುಲ್ ಅವರನ್ನು ಬರಮಾಡಿಕೊಳ್ಳಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕೆ ಎಲ್ ರಾಹುಲ್ ಅವರನ್ನು ಗೌರವಿಸಿದರು.
Last Updated : Feb 3, 2023, 8:33 PM IST