ಮಹಿಳೆ ಮೇಲೆ ಅಮಾನುಷ ಹಲ್ಲೆ: ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ - ಕೊಲೆ ಯತ್ನ ಪ್ರಕರಣ
Published : Aug 29, 2023, 8:46 AM IST
ಸತಾರಾ(ಮಹಾರಾಷ್ಟ್ರ):ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯನ್ನು ಕ್ರೂರವಾಗಿ ಥಳಿಸಿದ ಘಟನೆ ಸತಾರ ಜಿಲ್ಲೆಯ ಮಾನ್ ತಾಲೂಕಿನ ಪನ್ವಾನ್ ಗ್ರಾಮದಲ್ಲಿ ನಡೆದಿದೆ. ನಾಲ್ವರು ದುಷ್ಕರ್ಮಿಗಳು ಬೆತ್ತದಿಂದ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಕಾಲಿನಿಂದ ಒದ್ದಿರುವ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಸಂಬಂಧ ಮಾಸ್ವಾಡ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದೇವದಾಸ್ ನರ್ಲೆ ಹಾಗೂ ಪಿಂಟು ನಾರ್ಲೆ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ ನರ್ಲೆ ಹಾಗೂ ಜಾನಪ್ಪ ಶಿಂಧೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂತ್ರಸ್ತ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಾಸ್ವಾಡ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಈ ಬಗ್ಗೆ ಸತಾರಾ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಶೇಖ್ ಪ್ರತಿಕ್ರಿಯಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸ್ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಬೊಗಳಿದ ನಾಯಿಯ ಮಾಲೀಕನೆಂದು ಭಾವಿಸಿ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ.. ಆರೋಪಿ ಬಂಧನ