ರಾಯಚೂರಲ್ಲಿ ಮಹಿಳೆಯಿಂದ ಒಂದು ಲಕ್ಷ ರೂಪಾಯಿ ದೋಚಿ ಪರಾರಿಯಾದ ಖದೀಮರು: ವಿಡಿಯೋ - ಸಾಮಾಜಿಕ ಜಾಲಾತಾಣಗಳಲ್ಲಿ ವೈರ್
ರಾಯಚೂರು: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ವಾಪಸಾಗುತ್ತಿದ್ದ ಮಹಿಳೆಯಿಂದ ಹಣ ದೋಚಿ ಖದೀಮರಿಬ್ಬರು ಪರಾರಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಅದ್ರೂನ್ ಬಡವಾಣೆ ನಿವಾಸಿ ಬಾನು ಹಣ ಕಳೆದುಕೊಂಡ ಮಹಿಳೆ. ಶನಿವಾರ ಮಹಿಳೆ ಎಸ್‌ಬಿಐ ಬ್ಯಾಂಕ್ನಿಂದ ಒಂದು ಲಕ್ಷ ಹಣ ಡ್ರಾ ಮಾಡಿಕೊಂಡು ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಏಕಾಏಕಿ ಖದೀಮರಿಬ್ಬರು ಬೈಕ್‌ನಲ್ಲಿ ಬಂದು ಮಹಿಳೆಯ ಕೈಯಿಂದ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಮಹಿಳೆ ಖದೀಮರನ್ನು ಹಿಡಿಯಲು ಯತ್ನಿಸಿದಾಗ ರಸ್ತೆ ಮೇಲೆ ಬಿದ್ದಿದ್ದಾರೆ. ನಂತರ ಮತ್ತೆ ಎದ್ದು ಖದೀಮರನ್ನು ಹಿಡಿಯುವಂತೆ ಕೂಗಿಕೊಂಡಿದ್ದಾರೆ. ಅಷ್ಟರಲ್ಲಾಗಲೇ ಕಳ್ಳರು ವೇಗವಾಗಿ ಬೈಕ್ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಖದೀಮರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ವೈರ್ ಆಗುತ್ತಿದೆ. ಘಟನೆ ಸಂಬಂಧ ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ಆಂಧ್ರಪ್ರದೇಶ ಮೂಲದ ಕಳ್ಳರ ಗ್ಯಾಂಗ್ ಇರಬಹುದು ಎಂದು ಶಂಕಿಸಿದ್ದಾರೆ.
ಇದನ್ನೂ ಓದಿ:Cyber frauds: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ: ₹33 ಲಕ್ಷ ಕಳೆದುಕೊಂಡ ಸಾಫ್ಟ್ವೇರ್ ಇಂಜಿನಿಯರ್