Watch Video - ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ.. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಯಲಹಂಕ ತಾಲೂಕಿನ ಅನಂತಪುರ ಗ್ರಾಮ
ಯಲಹಂಕ:ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ವಿಡಿಯೋ ಪಕ್ಕದಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿ ಹೊಡೆದ ಬೈಕ್ನಲ್ಲಿದ್ದವರಿಗೂ ಗಾಯಗಳಾಗಿವೆ.
ಘಟನೆಗೆ ಕಾರಣ:ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ (ಸ್ಕೂಟಿ) ಕಾಲೇಜು ವಿದ್ಯಾರ್ಥಿನಿ ಬರುತ್ತಿದ್ದಳು. ಇದೇ ಸಮಯಕ್ಕೆ ಮತ್ತೊಂದು ಬೈಕನಲ್ಲಿ ಎದುರು ಬಂದ ಇಬ್ಬರು ಯುವಕರು ಅಡ್ಡಾ- ದಿಡ್ಡಿ ಬಂದು ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸದ ಭಯಾನಕ ದೃಶ್ಯ ಪಕ್ಕದಲ್ಲಿದ್ದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಒಮ್ಮೆ ಝಲ್ ಎನಿಸುವಂತಿದೆ. ಘಟನೆ ತಕ್ಷಣವೇ ಅಲ್ಲೆ ಇದ್ದ ಸ್ಥಳೀಯರು ಗಾಯಾಳು ವಿದ್ಯಾರ್ಥಿನಿ ಹಾಗೂ ಯುವಕರನ್ನು ರಕ್ಷಿಸಿ ಯಲಹಂಕ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಒಳಗಾದ ಯುವಕರು ರಾಮಗೊಂಡನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಾರ್ಮಾಡಿ ಘಾಟ್ನಲ್ಲಿ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: 10 ಕಿ ಮೀಗೂ ಹೆಚ್ಚು ದೂರ ಟ್ರಾಫಿಕ್ ಜಾಮ್