ನೀರಿಗಾಗಿ ಕೃಷಿ ಜಮೀನುಗಳಿಗೆ ಲಗ್ಗೆ ಇಡುತ್ತಿರುವ ಮೊಸಳೆ: ಬೃಹದಾಕಾರದ ಮೊಸಳೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ - ಮೊಸಳೆ
ಚಿಕ್ಕೋಡಿ (ಬೆಳಗಾವಿ): ಬೇಸಿಗೆಯ ಬಿಸಿಲಿನ ಹೊಡೆತಕ್ಕೆ ಕೃಷ್ಣಾ ನದಿಯಲ್ಲಿ ಕಳೆದ ಮೂರು ತಿಂಗಳಿನಿಂದ ನೀರು ಇಲ್ಲದೆ ಬರಿದಾಗಿದೆ. ನದಿಯಲ್ಲಿ ನೀರಿಲ್ಲದ ಹಿನ್ನೆಲೆಯಲ್ಲಿ ನದಿ ಅಕ್ಕ ಪಕ್ಕದಲ್ಲಿರುವ ಗ್ರಾಮಗಳು ಹಾಗೂ ಕೃಷಿ ಜಮೀನುಗಳಿಗೆ ಬೃಹತ್ ಗಾತ್ರದ ಮೊಸಳೆಗಳು ಲಗ್ಗೆ ಇಡುತ್ತಿವೆ. ಬೃಹದಾಕಾರದ ಮೊಸಳೆಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ರುದ್ರೇಶ್ ಮಠಪತಿ ಎಂಬುವರ ಕಬ್ಬಿನ ಗದ್ದೆಯಲ್ಲಿ 15 ಅಡಿ ಉದ್ದದ ಬೃಹದಾಕಾರದ ಮೊಸಳೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿದು ಸಂರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಕಬ್ಬಿನ ತೋಟದಲ್ಲಿ ಮೊಸಳೆ ಕಾಣಿಸುತ್ತಿದ್ದಂತೆ ಸ್ಥಳೀಯ ಅಥಣಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಾಣಿಗೇರ ಹಾಗೂ ಸಿಬ್ಬಂದಿ ವರ್ಗ ದೌಡಾಯಿಸಿ ಬೃಹತ್ ಗಾತ್ರದ ಮೊಸಳೆಯನ್ನು ಹಿಡಿದುಕೊಂಡು ಹೋಗಿದ್ದಾರೆ.
ಇದನ್ನೂ ನೋಡಿ:ಹಳಿ ಮೇಲೆ ಸಿಲುಕಿದ ಹಸು: ತುರ್ತು ಬ್ರೇಕ್ ಹಾಕಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ನಿಲ್ಲಿಸಿದ ಚಾಲಕ