ಕಾಂಗ್ರೆಸ್ನವರು ಕಿವಿಗೆ ಚೆಂಡು ಹೂವು ಇಟ್ಟುಕೊಂಡು ಓಡಾಡಬೇಕು : ಸಿ ಟಿ ರವಿ - etv bharat karnataka
ಚಿಕ್ಕಮಗಳೂರು:ಮುಖ್ಯಮಂತ್ರಿ ಬಸವರಾಜ್ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಆಶಯವನ್ನು ಬಿಂಬಿಸುವ ಬಜೆಟ್. ಸರ್ವಸ್ಪರ್ಶಿ, ಸರ್ವ ವ್ಯಾಪಿಯಾಗಿರುವ ಬಜೆಟ್ ಎಂದು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ. ಮೂಲಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ಇದು ಅಭಿವೃದ್ಧಿ ಕರ್ನಾಟಕದ ಆಶಯದ ಬಜೆಟ್ ಎಂದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕರಿಂದ ಚೆಂಡು ಹೂವು ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಚೆಂಡು ಹೂವು ಪರ್ಮನೆಂಟ್. ಅವರು ಕಿವಿಗೆ ಚೆಂಡು ಹೂವು ಇಟ್ಟುಕೊಂಡು ಓಡಾಡಬೇಕು ಎಂದು ಸಿ ಟಿ ರವಿ ವ್ಯಂಗ್ಯವಾಡಿದರು.
ಇದನ್ನೂ ಓದಿ:ಡಿಕೆಶಿ ಕಿವಿಯಿಂದ ಚೆಂಡು ಹೂವು ತೆಗೆದ ಬಿಎಸ್ವೈ: ವಿಡಿಯೋ