ಕರ್ನಾಟಕ

karnataka

ಸಿಲಿಂಡರ್ ಸ್ಪೋಟ ಹೊತ್ತಿ ಉರಿದ ಮನೆ

ETV Bharat / videos

ಕುಮಟಾದ ಹೆಗಡೆ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟ, ಹೊತ್ತಿ ಉರಿದ ಮನೆ - ಎರಡು ಸಿಲಿಂಡರ್ ಸ್ಪೋಟ

By ETV Bharat Karnataka Team

Published : Dec 16, 2023, 10:54 PM IST

ಕಾರವಾರ(ಉತ್ತರಕನ್ನಡ)ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕುಮಟಾದ ಹೆಗಡೆ ಗ್ರಾಮದಲ್ಲಿ ಇಂದು ನಡೆದಿದೆ. ಹೆಗಡೆ ಗ್ರಾಮದ ನಾರಾಯಣ ಮುಕ್ರಿ ಅವರ‌ ಮನೆಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಹಾನಿಯುಂಟಾಗಿದೆ.

ಸಿಲಿಂಡರ್ ಸ್ಫೋಟದಿಂದ ಮನೆ ಬೆಂಕಿಗಾಹುತಿ :ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಬೆಂಕಿ ತಗುಲಿ ಸಂಪೂರ್ಣವಾಗಿ ಹಂಚಿನ ಮನೆ ಹಾನಿಗೆ ಒಳಗಾಗಿದೆ. ಮನೆಯಲ್ಲಿ ಯಾರೂ ಇಲ್ಲದೇ ಇರುವುದರಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಮನೆಯಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮ: ಇನ್ನು ಮನೆಯಲ್ಲಿದ್ದ‌ ಬಟ್ಟೆ ಸೇರಿದಂತೆ ಕಾಳು ಕಡಿ, ವಿವಿಧ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆಯಿಂದ ನಾರಾಯಣ ಮುಕ್ರಿ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕುವಂತಾಗಿದೆ.  ಬೆಂಕಿ ತಗುಲಿರುವುದನ್ನು ನೋಡಿದ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿತು.

ಇದನ್ನೂ ಓದಿ :ಚಿಕ್ಕಬಳ್ಳಾಪುರ: ರೈಲಿಗೆ ಸಿಲುಕಿ 80ಕ್ಕೂ ಹೆಚ್ಚು ಕುರಿಗಳು ಸಾವು

ABOUT THE AUTHOR

...view details