ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ - etv bharat kannada
Published : Dec 18, 2023, 4:10 PM IST
ಬೆಂಗಳೂರು: ನಾನು ದೆಹಲಿಗೆ ತೆರಳುತ್ತಿದ್ದೇನೆ, ಸಿಎಂ ಸಿದ್ದರಾಮಯ್ಯ ಮತ್ತು ನಾನು ನಿಗಮ ಮಂಡಳಿ ನೇಮಕ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ಬರುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ" ಎಂದು ಹೇಳಿದರು. ಇದೇ 21ಕ್ಕೆ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿರುವ ಬಗ್ಗೆ ಪ್ರತಿಕ್ರಿಯಿಸಿ, ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ ಎಂದು ತಿಳಿಸಿದರು.
ಇತ್ತೀಚಿಗೆ, ಬೆಂಗಳೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಮೊದಲ ಪಟ್ಟಿಯಲ್ಲಿ ಫಸ್ಟ್ ಟೈಂ ಶಾಸಕರಾದವರಿಗೆ ಅವಕಾಶ ನೀಡಿಲ್ಲ. ಮುಂದಿನ ಪಟ್ಟಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನವಾಗಿದೆ. ನಿಗಮ ಮಂಡಳಿ ನೇಮಕಾತಿಯಲ್ಲಿ ಕಾರ್ಯಕರ್ತರಿಗೂ ಅವಕಾಶ ನೀಡುವ ಸಂಬಂಧ ನಾನು, ಸಿದ್ದರಾಮಯ್ಯ ಹಾಗೂ ಸುರ್ಜೇವಾಲ ಮಾತನಾಡಿದ್ದೇವೆ ಎಂದು ಹೇಳಿದ್ದರು.
ಇದನ್ನೂ ಓದಿ:ಎಸ್ ಟಿ ಸೋಮಶೇಖರ್ ಒಂದು ನಿರ್ಧಾರಕ್ಕೆ ಬರುವುದು ಒಳ್ಳೆಯದು: ಬಿ ಸಿ ಪಾಟೀಲ್