ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ - ಈಟಿವಿ ಭಾರತ್ ಕನ್ನಡ ನ್ಯೂಸ್
ರಾಯಚೂರು :ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸಲು ಜನರು ಸಂಪೂರ್ಣ ಬಹುಮತ ನೀಡಿದ್ದಾರೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದೇವೆ. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗು ಉನ್ನತ ಸಚಿವ ಸ್ಥಾನವನ್ನು ನೀಡಬೇಕೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಿರ್ಜಾಪುರ ಒತ್ತಾಯಿಸಿದ್ದಾರೆ.
ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಗಳಿಸಿದ್ದು, ಈ ನಾಲ್ವರಲ್ಲಿ ಸಿಂಧನೂರು ಶಾಸಕರಾಗಿ ಹಂಪನಗೌಡ ಬಾದರ್ಲಿ ಐದು ಬಾರಿ ಶಾಸಕರಾಗಿದ್ದಾರೆ. ಹೀಗಾಗಿ ಹಂಪನಗೌಡರಿಗೆ ಸಚಿವ ಸ್ಥಾನ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು. ಹಿರಿಯರು ಮತ್ತು ಅನುಭವಿ ರಾಜಕಾರಣಯಾಗಿದ್ದು, ಹಂಪನಗೌಡ ಎಲ್ಲಾ ಸಮಾಜವನ್ನು ಒಗ್ಗೂಡಿಸಿಕೊಂಡು ಹೋಗುತ್ತಾರೆ ಎಂದು ಒತ್ತಾಯ ಮಾಡಿದರು. ಇನ್ನು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ ಖಂಡ್ರೆಯವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಇದನ್ನೂ ಓದಿ :ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ.. ಅಭಿಮಾನಿಗಳು, ಬೆಂಬಲಿಗರಿಂದ ಸಂಭ್ರಮಾಚರಣೆ