ಬಾಗಲಕೋಟೆ: ಡೀಸೆಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿಗಾಹುತಿ - diesel lorry overturned
ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ತುಂಬಿದ್ದ ಟ್ಯಾಂಕರ್ವೊಂದು ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಬೆಂಕಿಗೆ ಆಹುತಿ ಆಗಿರುವ ಘಟನೆ ನಗರದಲ್ಲಿ ಲೋಕಾಪುರ ಪಟ್ಟಣದ ಕೇಶವ ಸಿಮೆಂಟ್ ಕಾರ್ಖಾನೆ ಬಳಿ ನಡೆದಿದೆ. ಸುಮಾರು 20 ಸಾವಿರ ಲೀಟರ್ ಡೀಸೆಲ್ ತುಂಬಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಕ್ಷಣಾರ್ಧದಲ್ಲೇ ಇಡೀ ಟ್ಯಾಂಕರ್ ಬೆಂಕಿಗೆ ಆಹುತಿ ಆಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಹಾನಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಸಮಯ ವಾಹನಗಳ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:29 PM IST