ಕರ್ನಾಟಕ

karnataka

ನೇಮ ನಡೆಯುತ್ತಿರುವಾಗಲೇ ಕುಸಿದುಬಿದ್ದು ದೈವನರ್ತಕ ಮೃತ್ಯು

ETV Bharat / videos

ನೇಮ ನಡೆಯುತ್ತಿರುವಾಗಲೇ ಕುಸಿದುಬಿದ್ದು ಮೃತಪಟ್ಟ ದೈವನರ್ತಕ! - ಈಟಿವಿ ಭಾರತ ಕನ್ನಡ

By

Published : Mar 30, 2023, 11:55 AM IST

ಕಡಬ (ದಕ್ಷಿಣ ಕನ್ನಡ) : ದೈವ ನರ್ತನ ಮಾಡುತ್ತಿರುವಾಗಲೇ ದೈವ ನರ್ತಕರೊಬ್ಬರು ಕುಸಿದು ಬಿದ್ದು ಇಹಲೋಕ ತ್ಯಜಿಸಿರುವ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಕಡಬದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತರು. ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿನ ದೈವಾರಾಧಕರಾಗಿ ಹಾಗೂ ಗ್ರಾಮದೈವಗಳ ಪರಿಚಾರಕರಾಗಿ ಇವರು ಸೇವೆ ಸಲ್ಲಿಸುತ್ತಿದ್ದರು.

(ಮಾರ್ಚ್​ 30) ಇಂದು ಬೆಳಗಿನ ಜಾವ ಎಡಮಂಗಲ ಗ್ರಾಮದ ಇಡ್ಯಡ್ಕ ಎಂಬಲ್ಲಿ ನೇಮೋತ್ಸವ ನಡೆಯುತ್ತಿತ್ತು. ದೈವನರ್ತಕರು ನರ್ತನ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ನರ್ತಕರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನೇಮೋತ್ಸವಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರ ಮೊಬೈಲಿನಲ್ಲಿ ಕುಸಿದು ಬೀಳುತ್ತಿರುವ ದೃಶ್ಯ ಸೆರೆಯಾಗಿದೆ. ಕಾಂತು ಅವರು ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ :ದಕ್ಷಿಣ ಒಳನಾಡಿನಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ABOUT THE AUTHOR

...view details