D K Shivakumar: ಉಜ್ಜಯಿನಿ ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್- ವಿಡಿಯೋ - ಶಕ್ತಿ ಯೋಜನೆ
ಮಧ್ಯಪ್ರದೇಶ : ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಮಧ್ಯಪ್ರದೇಶ ಪ್ರವಾಸದಲ್ಲಿದ್ದಾರೆ. ಇಂದು ಬೆಳಗ್ಗೆ ಪುರಾಣ ಪ್ರಸಿದ್ಧ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಭಸ್ಮ ಆರತಿಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದರ್ಶನಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾನು ಕಾಲ ಭೈರವನ ಭಕ್ತ. ಈ ಹಿಂದೆ ಕೂಡ ಸಂಕಷ್ಟದ ಸಮಯದಲ್ಲಿ ಉಜ್ಜಯಿನಿಗೆ ಮೂರು ಬಾರಿ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದಿದ್ದೇನೆ. ಮಹಾಕಾಳೇಶ್ವರ ದೇವರು ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡಿದ್ದಾರೆ, ನಾನು ಚುನಾವಣೆಗೂ ಮುನ್ನ ಇಲ್ಲಿಗೆ ಬಂದಿದ್ದೆ. ಇಂದು ಕರ್ನಾಟಕದಲ್ಲಿ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ನಾವು ನೀಡಿರುವ ಎಲ್ಲ 5 ಭರವಸೆಗಳನ್ನು ಜಾರಿಗೊಳಿಸಿ ಉತ್ತಮ ಸರ್ಕಾರ ನೀಡುತ್ತೇವೆ" ಎಂದರು.