ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಕುಟುಂಬ ಭೇಟಿ; ವಿಶೇಷ ಪೂಜೆ ಸಲ್ಲಿಕೆ
ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಪಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ದಾಖಲೆಯ ಮತ ಪಡೆದು ಗೆಲುವು ಸಾಧಿಸಿದ್ದಾರೆ. ಇದೀಗ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನದ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ನಡುವೆ ಇಂದು ತಿಪಟೂರು ತಾಲೂಕಿನಲ್ಲಿರುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಕುಟುಂಬಸಮೇತ ಭೇಟಿ ನೀಡಿ ಪೂಜೆ ನೆರವೇರಿಸಿದರು.
ಚುನಾವಣೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಇಲ್ಲಿಗೆ ಭೇಟಿ ನೀಡಿದ್ದು, ಕರಿಬಸವ ಶ್ರೀಗಳ ಆಶೀರ್ವಾದ ಪಡೆದರು. ಆ ಬಳಿಕ ಶ್ರೀಗಳ ಗದ್ದುಗೆಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಐಶ್ವರ್ಯ, ಅಳಿಯ ಅಮರ್ಥ್ಯ ಸಿದ್ದಾರ್ಥ್, ಪುತ್ರಿ ಆಭರಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಡಿ.ಕೆ.ಶಿವಕುಮಾರ್ ಅವರನ್ನು ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಹೂವಿನ ಹಾರ ಹಾಕಿ ಬರಮಾಡಿಕೊಂಡರು. ಮಠದ ಹಿಂಬದಿಯಿರುವ ಗವಿಗೆ ತೆರಳಿದ ಡಿಕೆಶಿ ಕುಟುಂಬ, ಅಲ್ಲಿ ಪೂಜೆ ಸಲ್ಲಿಸಿದರು. ಕಳೆದ 15 ದಿನಗಳ ಹಿಂದೆ ಇದೇ ಗವಿಯಲ್ಲಿ ಡಿಕೆಶಿ ಕುಟುಂಬಸ್ಥರು ಪೂಜೆ ನೆರವೇರಿಸಿದ್ದರು.
ಇದನ್ನೂ ಓದಿ:'ಎಲ್ಲಿ ಶ್ರಮವಿದೆಯೋ ಅಲ್ಲಿ ಪ್ರತಿಫಲ..': ನೊಣವಿನಕೆರೆ ಅಜ್ಜಯ್ಯನ ದರ್ಶನಕ್ಕೆ ತೆರಳಿದ ಡಿಕೆಶಿ