ಕರ್ನಾಟಕ

karnataka

ತುಮಕೂರು: ಸಿದ್ದಗಂಗಾ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ

ETV Bharat / videos

ತುಮಕೂರು: ಸಿದ್ದಗಂಗಾ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ - etv bharat kannada

By

Published : May 14, 2023, 5:34 PM IST

ತುಮಕೂರು:ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ. ಇಂದು ಸಂಜೆ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಎಂ ಬಿ ಪಾಟೀಲ್​, ಡಾ ಜಿ ಪರಮೇಶ್ವರ್​ ಮುಖ್ಯಮಂತ್ರಿ ರೇಸ್​ನಲ್ಲಿದ್ದು, ಮುಖ್ಯಮಂತ್ರಿ ಹುದ್ದೆ ಪಡೆಯಲು ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಇದರ ನಡುವೆಯೇ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ ನೀಡಿ ಡಾ.‌ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದರು. ಗದ್ದುಗೆಗೆ ನಮಸ್ಕರಿಸಿದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಡಿ ಕೆ ಶಿವಕುಮಾರ್‌ ಜೊತೆಗೆ ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಹಾಜರಿದ್ದರು. ಇನ್ನು ಇಂದು ನಡೆಯಲಿರುವ ಸಿಎಲ್​ಪಿ ಸಭೆಗೂ ಮುನ್ನ ಡಿ ಕೆ ಶಿವಕುಮಾರ್​ ಮಠಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ ಹನೂರು ಎಂಎಲ್ಎ: ಮುಡಿ ಕೊಟ್ಟ ಕೈ ಶಾಸಕನ ಪುತ್ರ

ABOUT THE AUTHOR

...view details