ಬೀದರ್ ಉತ್ಸವ.. ಗಮನ ಸೆಳೆದ ಶ್ವಾನ ಪ್ರದರ್ಶನ
ಬೀದರ್: ಬೀದರ್ ಉತ್ಸವ ನಿಮಿತ್ತ ಇಲ್ಲಿನ ಕೋಟೆ ಆವರಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಭಾನುವಾರ ಶ್ವಾನ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್, ನಾಯಿ ಅತ್ಯಂತ ನಿಷ್ಠಾವಂತ ಪ್ರಾಣಿಯಾಗಿದೆ, ಮನೆಯ ರಕ್ಷಣೆಯ ಜೊತೆಗೆ ಸ್ನೇಹ ಜೀವಿಯಾಗಿದೆ. ಸಾಕು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ವಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹೇಳಿದರು. ಪ್ರದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ನಾನಾ ತಳಿಯ ಶ್ವಾನಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಇತರರು ಉಪಸ್ಥಿತರಿದ್ದರು.
Last Updated : Feb 3, 2023, 8:38 PM IST