Watch: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು - ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದು ಪಲ್ಟಿ
ತುಮಕೂರು: ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಅಂಚೇಪಾಳ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಕುಣಿಗಲ್ ತಾಲೂಕಿನ ಅಮೃತೂರು ಗ್ರಾಮದ ಕಡೆ ಹೋಗುತಿದ್ದ ಇನ್ನೋವಾ ಕಾರು ಪಲ್ಟಿಯಾಗಿದೆ.
ರಸ್ತೆ ಮೇಲಿನ ಹಂಪ್ಸ್ ತಿಳಿಯದೇ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಇನ್ನೋವಾ ಕಾರು ಸಮೀಪದಲ್ಲಿದ್ದ ಹೋಟೆಲ್ ಮುಂದೆ ನಿಂತಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಮೈ ಜುಂ ಎನಿಸುವಂತಿದೆ.
ಇದನ್ನೂ ನೋಡಿ:ಅಪಘಾತದಿಂದ ಪಾರಾದ ಯುವಕ; ಮೈ ಜುಂ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ..