ಬಸ್ ಚಲಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತ.. ಡ್ರೈವರ್ ಸಾವು, ಕಾರ್ ಶೋರೂಂ ಜಖಂ
ಭಾವನಗರ(ಗುಜರಾತ್): ಪ್ರಯಾಣಿಕರಿಂದ ತುಂಬಿದ್ದ ಬಸ್ ಚಲಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮಾರುತಿ ಕಾರ್ ಶೋರೂಂಗೆ ನುಗ್ಗಿರುವ ಘಟನೆ ಇಲ್ಲಿನ ದೇಸಾಯಿನಗರದಲ್ಲಿ ನಡೆದಿದೆ. ಆದ್ರೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದು, ಘಟನೆಯಲ್ಲಿ ಶೋರೂಂ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿವೆ. ಅಪಘಾತದ ವೇಳೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated : Feb 3, 2023, 8:35 PM IST