ಕರ್ನಾಟಕ

karnataka

ETV Bharat / videos

ಪಿಯು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವ - 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

🎬 Watch Now: Feature Video

ಪರೀಕ್ಷೆ ಬರೆಯಲು ಬಂದ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಬಿ ಸಿ ನಾಗೇಶ್

By

Published : Mar 9, 2023, 2:35 PM IST

ತುಮಕೂರು: ರಾಜ್ಯದಲ್ಲಿ ಇಂದಿನಿಂದ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ತಿಪಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿದರು. ಧೈರ್ಯವಾಗಿ ಪರೀಕ್ಷೆ ಎದುರಿಸುವಂತೆ ಪರೀಕ್ಷಾರ್ಥಿಗಳಿಗೆ ಸಚಿವರು ಸಲಹೆ ನೀಡಿದರು.

"ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಡಿಯಲ್ಲಿ ನಡೆಸಲಾಗುತ್ತಿದೆ. ಇಂದಿನಿಂದ ಮಾರ್ಚ್ 29 ರ ವರೆಗೆ ಎಕ್ಸಾಂ ನಡೆಯಲಿದೆ. ರಾಜ್ಯಾದ್ಯಂತ 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಅಲ್ಲದೇ, ಕಲಾ ವಿಭಾಗದಲ್ಲಿ 2,34,815, ವಾಣಿಜ್ಯ ವಿಭಾಗದಲ್ಲಿ 2,47,269 ಹಾಗೂ ವಿಜ್ಞಾನ ವಿಭಾಗದಲ್ಲಿ 2,44,129 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ" ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದರು. 

ಇದನ್ನೂ ಓದಿ:ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ

ABOUT THE AUTHOR

...view details