ಕರ್ನಾಟಕ

karnataka

ಕೋಲಾರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ETV Bharat / videos

ಕೋಲಾರ: ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ - ಕೋಲಾರ ಒತ್ತುವರಿ ತೆರವು ಕಾರ್ಯಾಚರಣೆ

By ETV Bharat Karnataka Team

Published : Aug 23, 2023, 1:00 PM IST

ಕೋಲಾರ:ಕಳೆದ ಹಲವಾರು ವರ್ಷಗಳಿಂದ ಕೋಲಾರ ಜಿಲ್ಲಾದ್ಯಂತ ಅರಣ್ಯ ಇಲಾಖೆಗೆ ಸೇರಿದ ಸಾವಿರಾರು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆ ಕೋಲಾರ ಡಿಎಫ್ಒ ಏಡುಕೊಂಡಲ ನೇತೃತ್ವದಲ್ಲಿ ಅರಣ್ಯ ಇಲಾಖೆಗೆ ಸೇರಿದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಅದರಂತೆ, ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಅರಣ್ಯ ಪ್ರದೇಶದ ಬಳಿ ಆಗಿರುವ ಒತ್ತುವರಿ ತೆರವು ಕಾರ್ಯ ನಡೆಸಲಾಗುತ್ತಿದೆ.

ಇಂದು ಮುಂಜಾನೆ ಮೂರು ಗಂಟೆಯಿಂದ ಸುಮಾರು 20 ಜೆಸಿಬಿಗಳ ಮೂಲಕ ಕಾರ್ಯಾಚರಣೆಗೆ ಇಳಿದಿರುವ ಅಧಿಕಾರಿಗಳು, ಹೊಗಳಗೆರೆ ಅರಣ್ಯ ಪ್ರದೇಶಕ್ಕೆ ಸೇರಿದ ಸುಮಾರು 120 ಎಕರೆ ಒತ್ತುವರಿ  ತೆರವು ಮಾಡಿ, ಅರಣ್ಯ ಇಲಾಖೆ ವಶಕ್ಕೆ ಪಡೆಯಲಿದ್ದಾರೆ. ಒತ್ತುವರಿದಾರರಿಗೆ ಈಗಾಗಲೇ ಇಲಾಖೆಯಿಂದ ನೋಟಿಸ್ ನೀಡಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಾಗೆಯೇ, ಕಳೆದ ಹದಿನೈದು ಇಪ್ಪತ್ತು ವರ್ಷದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ ಇದಾಗಿದೆ. 

ಇದನ್ನೂ ಓದಿ :ಕೋಲಾರ: ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪ್ರತಿಭಟನೆ.. ಮೈಮೇಲೆ ಪೆಟ್ರೋಲ್ ಎರಚಿಕೊಂಡು ಆತಂಕ ಸೃಷ್ಟಿಸಿದ ಮಹಿಳೆಯರು

ABOUT THE AUTHOR

...view details