ವಿಡಿಯೋ: ಪೊಲೀಸ್ ಅಧಿಕಾರಿಯ ಕಾಲರ್‌ಪಟ್ಟಿ ಹಿಡಿದು ಕಾಂಗ್ರೆಸ್‌ನ ರೇಣುಕಾ ಚೌಧರಿ ಆಕ್ರೋಶ - ವಶಕ್ಕೆ ಪಡೆಯಲು ಬಂದ ಪೊಲೀಸ್ ಕಾಲರ್ ಹಿಡಿದ ಮಾಜಿ ಸಚಿವೆ
ಹೈದರಾಬಾದ್: ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ಮಾಡುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ತೆಲಂಗಾಣ ಕಾಂಗ್ರೆಸ್ ನಾಯಕಿ/ ಮಾಜಿ ಸಚಿವೆ ರೇಣುಕಾ ಚೌಧರಿ ಅವರೂ ಕೂಡಾ ಪ್ರತಿಭಟನೆಗೆ ಇಳಿದಿದ್ದಾರೆ. ಹೋರಾಟದ ವೇಳೆ ನಾಯಕಿಯನ್ನು ವಶಕ್ಕೆ ಪಡೆಯಲು ಬಂದಾಗ ಅವರು ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದು ಆಕ್ರೋಶ ತೋರಿಸಿದರು. ಇನ್ನೊಂದೆಡೆ, ಕಾಂಗ್ರೆಸ್ ಹಮ್ಮಿಕೊಂಡಿದ್ದ ರಾಜಭವನ ಚಲೋ ಹಿಂಸಾಚಾರಕ್ಕೆ ತಿರುಗಿದ್ದು, ಕಾರ್ಯಕರ್ತರು ಸ್ಕೂಟರ್‌ಗೆ ಬೆಂಕಿ ಹಚ್ಚಿ, ಟಿಎಸ್‌ಆರ್‌ಟಿಸಿ ಬಸ್ ಗ್ಲಾಸ್‌ಗಳನ್ನೂ ಒಡೆದಿದ್ದಾರೆ. ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ, ಸಿಎಲ್‌ಪಿ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತಿತರರನ್ನು ಪೊಲೀಸರು ಬಂಧಿಸಿದ್ದಾರೆ.
Last Updated : Feb 3, 2023, 8:23 PM IST