ಕರ್ನಾಟಕ

karnataka

ಒಡಿಶಾದ ಬಾಲಸೋರ್​ನಲ್ಲಿ ಕೋರಮಂಡಲ್​ ಎಕ್ಸ್​ಪ್ರೆಸ್​​ ರೈಲು ಅಪಘಾತ: ಹಲವರಿಗೆ ಗಂಭೀರ ಗಾಯ

By

Published : Jun 2, 2023, 9:01 PM IST

Updated : Jun 2, 2023, 9:24 PM IST

ಒಡಿಶಾದ ಬಾಲಸೋರ್​ನಲ್ಲಿ ಕೋರಮಂಡಲ್​ ಎಕ್ಸ್​ಪ್ರೆಸ್​​ ರೈಲು ಅಪಘಾತ: ಹಲವರಿಗೆ ಗಂಭೀರ ಗಾಯ

ಭುವನೇಶ್ವರ (ಒಡಿಶಾ):ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಕೋರಮಂಡಲ್​ ಎಕ್ಸ್​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದ್ದು, ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತರ ಬಗ್ಗೆ ಯಾವುದೇ ವಿವರ ಲಭ್ಯವಾಗಿಲ್ಲ. ಮಾಹಿತಿಗಳ ಪ್ರಕಾರ ಬಲಸ್ವರ್ ಜಿಲ್ಲೆಯ ಬಹಂಗಾ ಬಳಿ ಎಕ್ಸ್​ಪ್ರೆಸ್​ ರೈಲು ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ 4 ಭೋಗಿಗಳು ಹಳಿ ತಪ್ಪಿರುವುದಾಗಿ ತಿಳಿದು ಬಂದಿದೆ.

ಈ ಭೋಗಿಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿಲುಕಿ ಹಾಕಿಕೊಂಡಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಈಗಾಗಲೇ ತಂಡಗಳು ಸ್ಥಳಕ್ಕೆ ತೆರಳಿವೆ. ಬಾಲಸೋರ್​ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಆಡಳಿತ ಅಧಿಕಾರಿಗಳು ಜೊತೆಗೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. 

ಪ್ರಸ್ತುತ ಘಟನಾ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್​ಆರ್​ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ. 

ಘಟನೆಯಲ್ಲಿ ನೂರಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಒಡಿಶಾ ಅಗ್ನಿಶಾಮಕ ಸೇವೆಗಳ ಡಿಜಿ  ಸುಧಾಂಶು ಸಾರಂಗಿ ಅವರು ಸ್ಥಳದಲ್ಲಿದ್ದು,  ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಎಸ್‌ಆರ್‌ಸಿ ಒಡಿಶಾ ಮತ್ತು ಹಿರಿಯ ಅಧಿಕಾರಿಗಳಾದ ಹೇಮಂತ್ ಶರ್ಮಾ, ಬಲ್ವಂತ್ ಸಿಂಗ್, ಅರವಿಂದ್ ಅಗರ್ವಾಲ್, ಅಗ್ನಿಶಾಮಕ ಸೇವೆಗಳ ಡಿಜಿ ಬಹನಾಗಾದಲ್ಲಿದ್ದು, ರೈಲು ಅಪಘಾತದ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ  ನಡೆಸುತ್ತಿದ್ದಾರೆ.

ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜು ಮತ್ತು ಎಲ್ಲ ಆಸ್ಪತ್ರೆಗಳನ್ನ ಹೈ ಅಲರ್ಟ್ ನಲ್ಲಿ ಇರಿಸಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಮೂರು NDRF ಘಟಕಗಳು, 4 ODRAF ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸಜ್ಜುಗೊಳಿಸಲಾಗಿದೆ. ಬಾಲಾಸೋರ್ ವೈದ್ಯಕೀಯ ಕಾಲೇಜಿನಿಂದ ವೈದ್ಯರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಇನ್ನು ಗಾಯಗೊಂಡ ಹತ್ತು ಪ್ರಯಾಣಿಕರಿಗೆ ಬಾಲಸೋರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಡುವೆ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿಯಾಗಿಲ್ಲ ಎಂದು ರೈಲ್ವೆ ಸಚಿವಾಲಯ ತಿಳಿಸಿದ್ದು,ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ. ಎರಡು ರೈಲುಗಳು ಹಳಿ ತಪ್ಪಿದ್ದು, 300 ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದು, 500 ಜನರು ರೈಲಿನಲ್ಲಿ ಸಿಲುಕಿದ್ದು, ಅವರ ರಕ್ಷಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಗೌಮುಖ ತಪೋವನದಲ್ಲಿ ಸಿಲುಕಿದ್ದ 7 ಮಂದಿ ಟ್ರೆಕ್ಕರ್ಸ್​​ಗಳನ್ನ ರಕ್ಷಿಸಿದ ಎಸ್‌ಡಿಆರ್‌ಎಫ್ ತಂಡ!

Last Updated : Jun 2, 2023, 9:24 PM IST

ABOUT THE AUTHOR

...view details