ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಕಗ್ಗಂಟು; ಸಿದ್ದರಾಮಯ್ಯ ಪರ ದೇವರ ಮೊರೆ ಹೋದ ಕುರುಬ ಸಮುದಾಯ - ಸಿದ್ದರಾಮಯ್ಯ ಪರ ಕುರುಬರು ದೇವರ ಮೊರೆ
ಬೀದರ್ : ಸಿದ್ದರಾಮಯ್ಯರನ್ನು ಮುಂದಿನ ಸಿಎಂ ಮಾಡಬೇಕು ಎಂದು ಕುರುಬ ಸಮುದಾಯದವರು ದೇವರ ಮೊರೆ ಹೋಗಿದ್ದಾರೆ. ಬೀದರ್ ನಗರದ ಹೊರವಲಯದ ಕುಂಬಾರವಾಡಲ್ಲಿರುವ ಬೀರದೇವರ ದೇವಸ್ಥಾನಕ್ಕೆ ತೆರಳಿರುವ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿ ಸುಮಾರು 1100 ತೆಂಗಿನಕಾಯಿ ಒಡೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಬೇಕು ಎಂದು ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ:ಸಿಎಂ ಹುದ್ದೆಗೆ ಪೈಪೋಟಿ: ದೆಹಲಿಗೆ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಂತೆ ತೆಂಗಿನಕಾಯಿ ಒಡೆದ ಅಭಿಮಾನಿಗಳು: ಬಳಿಕ ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವಲಯದಲ್ಲಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿ ಮಾಸ್ ಲೀಡರ್ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಪ್ರಾರ್ಥಿಸಿ ತೆಂಗಿನಕಾಯಿ ಒಡೆದಿದ್ದಾರೆ. ಒಂದು ಕಡೆ ಡಿಕೆಶಿಯವರನ್ನು ಸಿಎಂ ಮಾಡುವಂತೆ ಒಕ್ಕಲಿಗರು ಒತ್ತಾಯ ಮಾಡುತ್ತಿದ್ರೆ. ಮೊತ್ತೊಂದು ಕಡೆ ಸಿದ್ದರಾಮಯ್ಯ ಪರ ಕುರುಬ ಸಮುದಾಯದ ಮುಖಂಡರು ದೇವರ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಸಿಎಂ ಆಯ್ಕೆ ಬಿಕ್ಕಟ್ಟು: ದೆಹಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್