ಕರ್ನಾಟಕ

karnataka

ಹುಬ್ಬಳ್ಳಿಯಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ETV Bharat / videos

ನೂತನ ಸಿಎಂ ಸಿದ್ದರಾಮಯ್ಯ ಪದಗ್ರಹಣ: ಹುಬ್ಬಳ್ಳಿಯಲ್ಲಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂಭ್ರಮ - ಸಿದ್ದು ಅಭಿಮಾನಿಗಳು

By

Published : May 20, 2023, 1:01 PM IST

ಹುಬ್ಬಳ್ಳಿ:ಸಿಎಂ ಯಾರು ಎನ್ನುವ ಹಗ್ಗಜಗ್ಗಾಟ ಕೊನೆಯಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ ಕೆ ಶಿವಕುಮಾರ್​ ಅವರು ಡಿಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಜರುಗುವ ಅದ್ಧೂರಿ ಕಾರ್ಯಕ್ರಮದಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ. 

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುರುಬ ಸಮಾಜದಿಂದ ಸಂಜಯ ದುಮ್ಮಕನಾಳ ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸುವ ಮೂಲಕ ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದೊಡ್ಡ ಗಾತ್ರದ ಕೇಕ್ ಕತ್ತರಿಸಿ, ಡೊಳ್ಳು ಬಾರಿಸಿ, ಡ್ಯಾನ್ಸ್ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು. ಸಿದ್ದರಾಮಯ್ಯ ಅವರ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಪೂರೈಸಿ, ಬಡವರ ಕಣ್ಣೀರು ಒರೆಸಲಿ ಎಂದು ತುಂಬು ಹೃದಯದಿಂದ ಹಾರಿಸಿದ್ದಾರೆ.

ಇದನ್ನೂ ನೋಡಿ:ಪ್ರಮಾಣ ವಚನ ಕಾರ್ಯಕ್ರಮ.. ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ

ABOUT THE AUTHOR

...view details